ಕಲಬುರಗಿ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಸುಮಿತ್ ಮೇಲೆ ಸಹವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮದ್ಯ ತಂದುಕೊಡುವಂತೆ, 30 ಸಾವಿರ ರೂಪಾಯಿ ನೀಡುವಂತೆ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಲಬುರಗಿ, ನವೆಂಬರ್ 3: ಹಾಸ್ಟೆಲ್ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ಸಹವಿದ್ಯಾರ್ಥಿಗಳೇ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ. ಮದ್ಯ ತಂದುಕೊಡುವಂತೆ ಹಾಗೂ 30 ಸಾವಿರ ರೂಪಾಯಿ ನೀಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಹಣ ನೀಡಲು ನಿರಾಕರಿಸಿದಾಗ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ಆರೋಪಿಸಿದ್ದಾನೆ.