ರಾತ್ರಿ ಬೇಗ ಮಲಗುವುದು ಮತ್ತು ಬೆಳಗ್ಗೆ ಬೇಗ ಏಳುವುದು ಮನುಷ್ಯನನ್ನು ಆರೋಗ್ಯವಂತ ವ್ಯಕ್ತಿಯನ್ನಾಗಿ ಮಾಡುತ್ತದೆ ಎಂದು ಹೇಳಲಾಗುತ್ತದೆ. ಹೌದು ಬೆಳಿಗ್ಗೆ ಬೇಗನೆ ಏಳುವುದರಿಂದ ದೇಹ ಮತ್ತು ಮನಸ್ಸು ತಾಜಾವಾಗಿರುತ್ತದೆ. ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನೀವು ಕೂಡ ರಾತ್ರಿ ಬೇಗ ಮಲಗಿ ಬ್ರಹ್ಮ ಮುಹೂರ್ತದಲ್ಲಿ ಏಳುವ ಅಭ್ಯಾಸವನ್ನು ಬೆಳೆಸಿಕೊಂಡು, ಈ ಅದ್ಭುತ ಪ್ರಯೋಜನಗಳನ್ನೆಲ್ಲಾ ಪಡೆದುಕೊಳ್ಳಿ. ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳುವುದು (waking up) ತುಂಬಾನೇ ಒಳ್ಳೆಯ ಅಭ್ಯಾಸ ಎಂದು ಹೇಳಲಾಗುತ್ತದೆ.