Fire Incident in Ramayana set: ‘ರಾಮಾಯಣ’ ಚಿತ್ರದ ಸೆಟ್ನಲ್ಲಿ ಬೆಂಕಿ ಅವಘಡ; ರಣಬೀರ್ ಕಪೂರ್ ಸಿನಿಮಾ ಶೂಟಿಂಗ್ಗೆ ಆತಂಕ! ಬಾಲಿವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗವೇ ಕುತೂಹಲದಿಂದ ಎದುರು ನೋಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’. ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೇ ವೇಳೆ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದ ಮುಂಬೈನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇದೀಗ ಸುದ್ದಿಯಾಗಿದೆ. ವರದಿಗಳ ಪ್ರಕಾರ, ಮುಂಬೈನ ಪ್ರೈಮ್ ಫೋಕಸ್ ಸ್ಟುಡಿಯೋದಲ್ಲಿ ‘ರಾಮಾಯಣ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಸ್ಟುಡಿಯೋ ಹೊರಭಾಗದಲ್ಲಿದ್ದ ಟೆಂಟ್ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.