ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ಸಿಯು ಬಿ.ಎಡ್ ಪರೀಕ್ಷೆಯನ್ನು ಮುಂದೂಡಲಾಗಿದೆ. 3 Min Read ಬೆಳಗಾವಿ: ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇದರ ಬಿಸಿ ವಿದ್ಯಾರ್ಥಿಗಳ ಪರೀಕ್ಷೆಗೂ ತಟ್ಟಿದೆ. ಇಂದು ನಡೆಯಬೇಕಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬಿ.ಎಡ್ ಪರೀಕ್ಷೆ ಮುಂದೂಡಲಾಗಿದೆ. ಬಿ.ಎಡ್ ಶೈಕ್ಷಣಿಕ ನಿರ್ವಹಣೆ ಮತ್ತು ಸಂಘಟನೆ ಪರೀಕ್ಷೆಯನ್ನು ಮುಂದೂಡಿ ಆರ್ಸಿಯು ವಿವಿ ಆದೇಶ ಹೊರಡಿಸಿದೆ. ಬೆಳಗ್ಗೆ 10ರಿಂದ 1 ಗಂಟೆ ಮಧ್ಯಾಹ್ನ 2ರಿಂದ 5 ಗಂಟೆವರೆಗೆ ಈ ಪರೀಕ್ಷೆ ನಡೆಯಬೇಕಿತ್ತು.