ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷದ ವಿರುದ್ಧ ನೀಡಿದ ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆ ಪಕ್ಷದ ನೀತಿಗಳ ಬಗ್ಗೆಯೇ ಹೊರತು ಯಾವುದೇ ವ್ಯಕ್ತಿಗಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರು, ನವೆಂಬರ್ 03: ‘ಅರಾಜಕತೆ ಸೃಷ್ಟಿ ಮಾಡಿದರೆ ಕಾಂಗ್ರೆಸ್ ಪಕ್ಷವನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ’ ಎಂಬ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಅವರ ಮನೆಗೆ ಮುತ್ತಿಗೆ ಹಾಕಲು ಕೂಡ ಯತ್ನಿಸಿದ್ದಾರೆ.