ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರಗಿ ಗ್ರಾಮದಲ್ಲಿ ಶಾಲಾ ಮಕ್ಕಳು ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಹದಗೆಟ್ಟ ರಸ್ತೆಯಿಂದ ಪ್ರತಿದಿನ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮಕ್ಕಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ಸಲಿಕೆ, ಪಿಕಾಸಿ ಹಿಡಿದು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಅಧಿಕಾರಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಲಬುರಗಿ, ನವೆಂಬರ್ 04: ರಸ್ತೆ ಸರಿಪಡಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಕ್ರಮ ಕೈಗೊಳ್ಳದ ಕಾರಣ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರಗಿ ಗ್ರಾಮದಲ್ಲಿ ಶಾಲಾ ಮಕ್ಕಳೇ ರಸ್ತೆ ದುರಸ್ತಿ ಮಾಡಿದ್ದಾರೆ.