ಬೀರೂರು: ಕನ್ನಡ ಕೇವಲ ಸಂವಹನದ ಮಾಧ್ಯಮವಲ್ಲ. ಅದು ನಮ್ಮ ನಾಡಿನ ಅಸ್ಮಿತೆ, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳ ಪ್ರತೀಕವಾಗಿದೆ. ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರ. ಶ್ರೀಮಂತ ಸಾಹಿತ್ಯ ಪರಂಪರೆ ಹಾಗೂ ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಕನ್ನಡದ ಉಳಿವು ಮತ್ತು ಬೆಳವಣಿಗೆ ಕೇವಲ ಸರ್ಕಾರ ಅಥವಾ ಸಂಘಟನೆಗಳ ಜವಾಬ್ದಾರಿಯಲ್ಲ. ಮಾತೃಭಾಷೆ ಮೇಲೆ ಅಭಿಮಾನ ಬೆಳೆಸಿಕೊಳ್ಳುವುದರ ಜತೆಗೆ ಮನೆಗಳಲ್ಲಿ ಮಕ್ಕಳೊಂದಿಗೆ ಕನ್ನಡ ಮಾತನಾಡುವ ಮೂಲಕ ಭಾಷೆ ಮೇಲಿನ ಪ್ರೀತಿ ಬೆಳೆಸಬೇಕು. ಆಡಳಿತಾತ್ಮಕ ಹಾಗೂ ದೈನಂದಿನ ವ್ಯವಹಾರಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.