ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಇಂದು ತೆರೆಕಂಡಿದೆ. ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಬೆಳಗ್ಗೆ 6 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಯಶ್ ಅಭಿಮಾನಿಗಳು ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ರಾವಣನಾಗಿ ಯಶ್ ಅವರ ಹೊಸ ಪಾತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದು, ಅಭೂತಪೂರ್ವ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಸಾವಿರಾರು ಅಭಿಮಾನಿಗಳು ಮುಂಜಾನೆಯಿಂದಲೇ ಥಿಯೇಟರ್ ಮುಂದೆ ಜಮಾಯಿಸಿದ್ದರು. ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬೃಹತ್ ಕಟೌಟ್ಗಳನ್ನು ಅಳವಡಿಸಿ, ಹೂವಿನಿಂದ ಅಲಂಕರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಭಿಮಾನಿಯೊಬ್ಬರು ಮಾತನಾಡಿ, ‘ಯಶ್ ಅವರನ್ನು ನಾವು ಪ್ರೇಮಿಯಾಗಿ ಅಥವಾ ಮಾಸ್ ಹೀರೋ ಆಗಿ ನೋಡಿದ್ದೇವೆ.