ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಸಿಎಸ್ಆರ್ ನೀತಿಯನ್ನು ಜಾರಿಗೊಳಿಸಿದ್ದು, ಶಿಕ್ಷಣ ರಂಗದಲ್ಲಿನ ಮೂಲಸೌಕರ್ಯ ಸಮಸ್ಯೆಗೆ ಸ. ಇನ್ನೊಂದೆಡೆ, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸುವ ಯೋಜನೆಯನ್ನೂ ಸರ್ಕಾರ ರೂಪಿಸಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕಾ ಪ್ರತಿನಿಧಿಗಳ ಸಭೆಯಲ್ಲಿ "ನಮ್ಮ ಶಾಲೆ ನಮ್ಮ ಜವಾಬ್ದಾರಿ' ಕಾರ್ಯಕ್ರಮ ಉದ್ಘಾಟಿಸಿ, ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ಗ್ರಾಮೀಣ ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಬೇಕು ಅಥವಾ ಅವುಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜತೆ ಜೋಡಿಸಲಾಗುತ್ತಿದೆ ಎಂದು ತಿಳಿಸಿದರು.