ಕಳೆದ 12 ದಿನಗಳಿಂದ ನಿರಂತರವಾಗಿ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಬೃಹತ್ ಹೋರಾಟ ಕೊನೆಗೂ ಅಂತ್ಯಗೊಂಡಿದೆ. ಪ್ರತಿ ಟನ್ ಕಬ್ಬಿಗೆ 5,500 ನಿಗದಿ ಮಾಡಬೇಕೆಂದು ಪಟ್ಟು ಹಿಡಿದಿದ್ದ ರೈತರು, ಸರ್ಕಾರ ಹಾಗೂ ಕಾರ್ಖಾನೆಗಳ ಆಡಳಿತ ಮಂಡಳಿ ನಿಗದಿಪಡಿಸಿದ 3,600 ಬೆಲೆಗೆ ತೃಪ್ತಿಗೊಂಡು ಗುರುವಾರ ಸಂಜೆ ಗುರ್ಲಾಪುರದ ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಬೆಳಗಾವಿ (ನವೆಂಬರ್ 05): ಕಳೆದ 12 ದಿನಗಳಿಂದ ನಿರಂತರವಾಗಿ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಬೃಹತ್ ಹೋರಾಟ ಕೊನೆಗೂ ಅಂತ್ಯಗೊಂಡಿದೆ.