ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಲಿದೆ. ಬೆಟ್ಟಕ್ಕೆ ಬೈಕ್ ಹಾಗೂ ಆಟೋಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಕೌದಳ್ಳಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸಂಚಾರಕ್ಕಾಗಿ 350ಕ್ಕೂ ಹೆಚ್ಚು ಕೆಎಸ್ಆರ್ಟಿಸಿ ವಿಶೇಷ ಬಸ್ಗಳನ್ನು ನಿಯೋಜಿಸಲಾಗಿದೆ. ನವೆಂಬರ್ 10ರಂದು ವೈಭವದ ಮಹಾರಥೋತ್ಸವ ಜರುಗಲಿದೆ. ಚಾಮರಾಜನಗರ, ನವೆಂಬರ್ 06: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ ಸಿಕ್ಕಿದೆ.