ಸಿಎಂ ಡಿಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಂವಾದ ನಡೆಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಾವು ತಯಾರಿಸುವ ಉತ್ಪನ್ನಗಳನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು. ಸ್ವತಃ ಸಿಎಂ ಡಿಕೆ ಶಿವಕುಮಾರ್ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಯಿಂದ ತನ್ನ ಮೊಮ್ಮಗಳಿಗೆ ತೊಟ್ಟಿಲು ಖರೀದಿ ಮಾಡಿದರು.