ಮೈಸೂರು: ವಿಶ್ವವಿದ್ಯಾಲಯ ಸೇರಿದಂತೆ ಇನ್ನಿತರ ಸಂಸ್ಥೆಗಳಿಂದ ನಡೆಯುವ ಸಂಶೋಧನೆಗಳು ಸಮಾಜಕ್ಕೆ ಕೊಡುಗೆ ನೀಡುವಂತಿರಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರ. ಲೋಕನಾಥ್ ಹೇಳಿದರು.ಜಯಲಕ್ಷ್ಮೀಪುರಂನಲ್ಲಿರುವ ಮಹಾಜನ ವಿದ್ಯಾಸಂಸ್ಥೆಯ ವಿವೇಕಾನಂದ ಭವನದಲ್ಲಿ ಬುಧವಾರ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಮುಂದುವರಿದ ಸಂಶೋಧನಾ ವಿಧಾನಗಳು ಮತ್ತು ಮಾರ್ಗಗಳ ವಿಷಯ ಕುರಿತ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಉನ್ನತ ಶಿಕ್ಷಣದಲ್ಲಿ ಸಂಶೋಧನೆ ಪ್ರಮುಖ ಅಂಗವಾಗಿದ್ದು, ಅದು ವಿವಿಧ ಆಯಾಮಗಳಲ್ಲಿ ಸತ್ಯಶೋಧನೆಗೆ ಹೆಚ್ಚು ಒತ್ತು ಕೊಡುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮಿಸಬೇಕು.