ಕುಂದಾಪುರ: ಬೈಂದೂರು-ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ-ಮುಳ್ಳಿಕಟ್ಟೆ ಫ್ಲೈಓವರ್ ಮೇಲೆ ಶುಕ್ರವಾರ ಬೆಳಗ್ಗೆ ಮೀನು ಸಾಗಾಟದ ವಾಹನವೊಂದು ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ. ಮುಂಬೈನಿಂದ ಮಂಗಳೂರಿಗೆ ಮೀನು ಸಾಗಿಸುತ್ತಿದ್ದ ವಾಹನ ಫ್ಲೈಓವರ್ ಮೇಲೆ ಚಲಿಸುತ್ತಿದ್ದಾಗ ಒಂದು ಬದಿಯ ಆಕ್ಸಲ್ ತುಂಡಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೆ ಪಲ್ಟಿಯಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಾದಚಾರಿಗೆ ಬಸ್ ಡಿಕ್ಕಿಕುಂದಾಪುರ: ಕೋಟೇಶ್ವರ ಗ್ರಾಮದ ಕೋಟೇಶ್ವರ ಮೀನು ವಾರ್ಕೆಟ್ ಬಳಿಯ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಕೊಕ್ಕರ್ಣೆ ಕಡೆಗೆ ಹೋಗುತ್ತಿದ್ದ ಬಸ್ಸೊಂದು ಕೋಟೇಶ್ವರದಿಂದ ಅಂಕದಕಟ್ಟೆಯ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಅಂಕದಕಟ್ಟೆ ಗೋಪಲಾಡಿ ನಿವಾಸಿ ಸುಧಾಕರ ಪೂಜಾರಿ ಎಂಬುವರಿಗೆ ಡಿಕ್ಕಿ ಹೊಡೆದಿದೆ.