Amit Shah: ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಅವರ ವಾಸ್ತವ್ಯ ಹೂಡಿದ ಖಾಸಗಿ ಹೋಟೆಲ್ನಲ್ಲೇ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. 19: ಶುಕ್ರವಾರ (ಸೆಪ್ಟೆಂಬರ್ 18) ನಗರಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಅವರು ವಾಸ್ತವ್ಯ ಹೂಡಿದ ಖಾಸಗಿ ಹೋಟೆಲ್ನಲ್ಲೇ ಚಿಕಿತ್ಸೆ ನೀಡಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಹೋಟೆಲ್ನಲ್ಲೇ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.