ಅಮಿತ್ ಶಾ ಅವರ SIR ಕುರಿತ ಹೇಳಿಕೆಗಳ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ಧ ಟೀಕಿಸಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳನ್ನು ಸಂದರ್ಭದಿಂದ ಹೊರತಾಗಿ ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿರುವ ಜೋಶಿ, SIR ವಿಚಾರದಲ್ಲಿ ದಾಖಲೆಗಳೊಂದಿಗೆ ಸಂಸತ್ನಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್ನ ಚುನಾವಣಾ ಸೋಲುಗಳನ್ನೂ ಪ್ರಸ್ತಾಪಿಸಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.