ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭವಾಗಿದೆ. ಹೆಬ್ಬಾಳದಿಂದ ಮೆಖ್ರಿ ಸರ್ಕಲ್ ನಡುವೆ ಸಾಗುವ ಈ ರಸ್ತೆಯಲ್ಲಿ ಮುಂದಿನ 18 ತಿಂಗಳ ಕಾಲ ಸರಕು ಸಾಗಣೆ ವಾಹನಗಳು ಹಾಗೂ ಬಸ್ಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು, ನವೆಂಬರ್ 7: ಬೆಂಗಳೂರಿನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಬಹುನಿರೀಕ್ಷಿತ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭವಾಗಿದೆ.