ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ಕೂಡಲೇ ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಮೇಕೆದಾಟು ಯೋಜನೆ ಜಾರಿಯಾದರೆ, ತಮಿಳುನಾಡಿಗೆ ಹಂಚಿಕೆಯಾಗಿರುವ ಕಾವೇರಿ ನದಿಯ ನೀರಿನ ಪಾಲಿಗೆ ಗಂಭೀರ ಅಪಾಯ ಎದುರಾಗಲಿದೆ ಎಂದು ಸಿಎಂ ವಿಜಯ್ ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿ, ನವೆಂಬರ್ 7: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯು ಮತ್ತೊಮ್ಮೆ ಕಾವೇರಿ ಜಲ ವಿವಾದಕ್ಕೆ ಕಾರಣವಾಗಿದೆ. ಈ ಮಹತ್ವದ ಯೋಜನೆಗೆ ತಮಿಳುನಾಡು ರಾಜ್ಯವು ತನ್ನ ತೀವ್ರ ವಿರೋಧವನ್ನು ಪುನರುಚ್ಚರಿಸಿದೆ.