ಪೋಲೆಂಡ್ನ ಪ್ರಸಿದ್ಧ ಪ್ರವಾಸಿ ಹಾಗೂ ಐತಿಹಾಸಿಕ ನಗರಿ ಕ್ರಾಕೋವ್ನ ಮುಖ್ಯ ಮಾರುಕಟ್ಟೆ ಚೌಕದಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು, 5 ಮಂದಿ ಮೃತಪಟ್ಟು 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಮುಖ ಪ್ರವಾಸಿ ತಾಣವಾಗಿರುವ ನಗರದ ಚೌಕಕ್ಕೆ ಕಾರಿನಲ್ಲಿ ಬಂದ ಬಂದೂಕುಧಾರಿಯೊಬ್ಬ ಸಾರ್ವಜನಿಕರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಈ ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೋಲೆಂಡ್ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ.