ಮಾಜಿ ಸಿಎಂ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ತನಿಖೆಯಿಂದ ಅಸಮಾಧಾನಗೊಂಡಿದ್ದಾರೆ. ರಾಹುಲ್ ಗಾಂಧಿ ಆಹ್ವಾನಿಸಿದ್ದ ದೆಹಲಿ ದೀಪಾವಳಿ ಸ್ನೇಹ ಸಮ್ಮಿಲನಕ್ಕೆ ಗೈರು ಹಾಜರಾಗಿದ್ದಾರೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಅಹಿಂದ ಮತ ದೂರವಾಗುತ್ತಿವೆ ಎಂದು ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಹೇಳಿದ್ದಾರೆ. ಬೆಂಗಳೂರು, ನವೆಂಬರ್ 07: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಹೊತ್ತಿರುವ ಕಿಚ್ಚು ಇನ್ನೂ ತಣ್ಣಗಾಗಿಲ್ವಾ? ಏಕೆಂದರೆ ದೆಹಲಿಯಲ್ಲಿ ದೀಪಾವಳಿ ಸ್ನೇಹ ಸಮ್ಮಿಲನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಹ್ವಾನಿಸಿದ್ರೂ, ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಹೋಗಿಲ್ಲ. ಮತ್ತೊಂದೆಡೆ ಅಹಿಂದ ನಾಯಕರ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ.