ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಸಮೀಪದಲ್ಲಿ ನಡೆಯುತ್ತಿದ್ದ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಫೋಟೋಶೂಟ್ಗಳು ವಾಹನ ಸವಾರರ ಗಮನವನ್ನು ಬೇರೆಡೆ ಸೆಳೆದು ಅಪಘಾತಗಳಿಗೆ ಕಾರಣವಾಗುತ್ತಿವೆ. ಇಂತಹ ಅನಿಯಂತ್ರಿತ ಫೋಟೋಶೂಟ್ಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಮೈಸೂರು, ನ.7: ಅರಮನೆ ಸಮೀಪದ ದೊಡ್ಡ ಗಡಿಯಾರ ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ವೆಂಕಟೇಶ್ ನಾಯಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.