ಬೆಂಗಳೂರು : ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮೊದಲ ಬಾರಿಗೆ ಶಾಲೆಗೆ ಸೇರಿದ ದಿನವಾದ ನ.7ನ್ನು ರಾಜ್ಯ ವಿದ್ಯಾರ್ಥಿ ದಿನಾಚರಣೆಯನ್ನಾಗಿ ಘೋಷಿಸಿ ಆಚರಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ. ಅತ್ಯಧಿಕ ಪದವಿಗಳನ್ನು ಪಡೆದ ಅಂಬೇಡ್ಕರ್ ಪ್ರತಿಯೊಬ್ಬ ವಿದ್ಯಾರ್ಥಿಗೂ ಮಾದರಿ ಹಾಗೂ ಸ್ಫೂರ್ತಿಯಾಗಿದ್ದಾರೆ. ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನ.7ನ್ನು ವಿದ್ಯಾರ್ಥಿ ದಿನವನ್ನಾಗಿ ಘೋಷಿಸಲು ಸರ್ಕಾರಕ್ಕೂ ಮನವಿ ಮಾಡಲಾಗುವುದು. ಬೆಂವಿವಿಯಲ್ಲಿ ವಿದ್ಯಾರ್ಥಿ ದಿನಾಚರಣೆ ಆರಂಭವಾಗಿರುವುದು ಹೊಸ ಪರ್ವಕ್ಕೆ ನಾಂದಿಯಾಗಿದ್ದು, ವಿದ್ಯಾರ್ಥಿಗಳು ಅಂಬೇಡ್ಕರ್ ಆದರ್ಶಗಳನ್ನು ಮೈಗೂಡಿಸಿಕೊಂಡು ಅಧ್ಯಯನ ಮತ್ತು ಸಂಶೋಧನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಸಿಂಡಿಕೇಟ್ ಸದಸ್ಯರಾದ ಬಿ.ಡಿ.ಗಂಗರಾಜು, ಡಾ.