ಶಿವಮೊಗ್ಗದಲ್ಲಿ ಬಿಜೆಪಿ-ಕಾಂಗ್ರೆಸ್ ರಾಜಕೀಯ ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸ ಹಾಗೂ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಮುಖಂಡರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಶಿವಮೊಗ್ಗ, ನವೆಂಬರ್ 08: ಶಿವಮೊಗ್ಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರ ಮತ್ತಷ್ಟು ತಾರಕಕ್ಕೇರಿದೆ. ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿದ್ಯಾನಗರದ ನಿವಾಸ ಹಾಗೂ ದೀನ್ ದಯಾಳ್ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಅವಹೇಳನಕಾರಿ ಪೋಸ್ಟರ್ಗಳನ್ನು ಅಂಟಿಸಿದ್ದಾರೆ.