ಮಂಗಳೂರು ,ಸೆ.30: ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್ಕ್ರಾಸ್ ಮಂಗಳೂರು ವಿ.ವಿ.ಘಟಕದ ಸಹಯೋಗದಲ್ಲಿ ಅ.1ರಂದು ಬೆಳಗ್ಗೆ 11:30ಕ್ಕೆ ರೆಡ್ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ... ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರೋಟರಿ ಜಿಲ್ಲೆ 3180 ಇದರ ಮಾಜಿ ಗವರ್ನರ್ ಕೆ.ಕೃಷ್ಣ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ರೆಡ್ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.