ಕರ್ನಾಟಕದ SIR ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಒಂದೇ ವ್ಯಕ್ತಿಗೆ ಹಲವು ವೋಟರ್ ಐಡಿಗಳು ಸೃಷ್ಟಿಯಾಗಿದ್ದು, ಕೆಲವರ ಹೆಸರು ಎರಡು ವಿಧಾನಸಭಾ ಕ್ಷೇತ್ರಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಅರ್ಜಿ ಪ್ರಕ್ರಿಯೆಯಲ್ಲಿನ ಲೋಪಗಳನ್ನು ಮುಖ್ಯ ಚುನಾವಣಾಧಿಕಾರಿ ಕಚೇರಿ ಒಪ್ಪಿಕೊಂಡಿದ್ದು, ಪರಿಶೀಲನೆ ಮತ್ತು ತಿದ್ದುಪಡಿ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು, ನವೆಂಬರ್ 08: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಒಂದೇ ವ್ಯಕ್ತಿಯ ಹೆಸರಿನಲ್ಲಿ ಹಲವು ವೋಟರ್ ಐಡಿಗಳು ಸೃಷ್ಟಿಯಾಗಿರುವುದು ಹಾಗೂ ಒಂದೇ ಮತದಾರರ ಹೆಸರು ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.