ಅಂತಾರಾಷ್ಟ್ರೀಯ ಹಣಕಾಸು ನಿಧಿಯ (IMF) ಮಾಜಿ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಅವರು ಯುವಜನತೆಗೆ ಕೃತಕ ಬುದ್ಧಿಮತ್ತೆ (AI) ಕುರಿತು ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ನಿಮ್ಮ ಸ್ವಂತ ಆಲೋಚನಾ ಸಾಮರ್ಥ್ಯವನ್ನು ಕಳೆದುಕೊಳ್ಳಬೇಡಿ. ಅರಿವಿನ ಶಕ್ತಿಯನ್ನು ಎಐಗೆ ಒಪ್ಪಿಸಬೇಡಿ ಎಂದು ಸಲಹೆ ನೀಡಿದ್ದಾರೆ. ರಾಜ್ ಶಮಾನಿ ಅವರ ಪೋಡ್ಕ್ಯಾಸ್ಟ್ನಲ್ಲಿ ಅವರು ಮಾತನಾಡುತ್ತಿದ್ದರು. ನವದೆಹಲಿ, ನವೆಂಬರ್ 8: ಕೃತಕ ಬುದ್ಧಿಮತ್ತೆಯ ಮೇಲೆ ಅತಿಯಾದ ಅವಲಂಬನೆಯು ಯುವಜನರ ಆಲೋಚನಾ ಸಾಮರ್ಥ್ಯಕ್ಕೆ ಮಾರಕ ಎಂದು ಐಎಂಎಫ್ನ ಮಾಜಿ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಎಚ್ಚರಿಸಿದ್ದಾರೆ.