ದೀಪಾವಳಿ ಹಬ್ಬದ ಸಂಭ್ರಮದಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಪಟಾಕಿ ಅಂತಾ ಕಾಡುಹಂದಿ ಓಡಿಸಲು ತಂದಿದ್ದ ಮದ್ದಿಗೆ ಬೆಂಕಿ ಹಚ್ಚಿದ್ದು, ಮದ್ದು ಸ್ಫೋಟಗೊಂಡು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಪ್ರಕರಣ ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಕಲಬುರಗಿ, ನವೆಂಬರ್ 08: ಪಟಾಕಿ ಹಚ್ಚುವ ಸಂಭ್ರಮ ಕ್ಷಣಾರ್ಧದಲ್ಲೇ ಸಾವಿನ ದುರಂತವಾಗಿ ಬದಲಾಗಿದೆ. ದೀಪಾವಳಿ ಪಟಾಕಿ ಅಂತ ಕಾಡುಹಂದಿಗಳಿಗಾಗಿ ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ 15 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಈ ಘೋರ ದುರಂತ ನಡೆದಿದೆ.