ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿ, ವೈದ್ಯಕೀಯ ನಿರ್ಲಕ್ಷ್ಯದಿಂದ ತೀವ್ರ ಅಸ್ವಸ್ಥಗೊಂಡ ಮಗುವಿನ ಪೋಷಕರಿಗೆ ಧೈರ್ಯ ತುಂಬಿದರು. ಚಿಕಿತ್ಸೆಗೆ ಎಷ್ಟೇ ಖರ್ಚಾದರೂ ಅದನ್ನು ತಾವೇ ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು. ವೈದ್ಯರೊಂದಿಗೆ ಸಮಾಲೋಚಿಸಿ, ಮಗುವಿನ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು. ಆರಂಭದಲ್ಲಿ ವೈದ್ಯರು ಸರಿಯಾಗಿ ಮಾಹಿತಿ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು, ನ.9: "ಕಳೆದ ಮೂರು ತಿಂಗಳಿನಿಂದ ಕಂದಮ್ಮ ಆಸ್ಪತ್ರೆಯಲ್ಲಿ ನರಳುತ್ತಿರುವುದು ಅತ್ಯಂತ ನೋವಿನ ಸಂಗತಿ. ವೈದ್ಯರ ನಿರ್ಲಕ್ಷ್ಯವೋ ಅಥವಾ ಔಷಧಿಯ ವ್ಯತ್ಯಾಸವೋ ಗೊತ್ತಿಲ್ಲ, ಆದರೆ ಮಗು ಸಂಪೂರ್ಣವಾಗಿ ಗುಣಮುಖವಾಗಿ ಮುಂಚಿನಂತೆ ಆಟವಾಡುವಂತಾಗಬೇಕು.