ದೀಪಾವಳಿ ಶುಭಾಶಯ ಕೋರಲು ಸಿಎಂ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಭೇಟಿ ಮಾಡಿದರು. ಒಂದೂವರೆ ಗಂಟೆಗೂ ಹೆಚ್ಚು ನಡೆದ ಈ ಭೇಟಿ ಕೇವಲ ಶುಭಾಶಯಕ್ಕೆ ಸೀಮಿತವಾಗಿಲ್ಲ. ಸ್ಟಿಂಗ್ ಆಪರೇಷನ್ ಕುರಿತ ಮುನಿಸಿನ ವಿಚಾರವನ್ನು ಡಿಕೆ ಶಿವಕುಮಾರ್ ಅಲ್ಲಗಳೆದರು. ವಿರೋಧಿಗಳು ಸುಳ್ಳು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ ಸಿಎಂ, ಪರೋಕ್ಷವಾಗಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದರು. ಬೆಂಗಳೂರು, ನವೆಂಬರ್ 09: ದೀಪಾವಳಿ ಹಬ್ಬದಶುಭ ಕೋರಲು ಸಿಎಂ ಡಿಕೆ ಶಿವಕುಮಾರ್ ಇಂದು ಮಾಜಿ ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ತೆರಳಿದರು. ಭೇಟಿ ಕೇವಲ ಹಬ್ಬದ ಶುಭಾಶಯ ವಿನಿಮಯಕ್ಕೆ ಮಾತ್ರ ಸೀಮಿತವಾಗಿಲ್ಲ. ಸುದೀರ್ಘ ಒಂದೂವರೆ ಗಂಟೆಗೂ ಹೆಚ್ಚು ಕಾಲ ಉಭಯ ನಾಯಕರು ಮುಕ್ತ ಮಾತುಕತೆ ನಡೆಸಿದರು.