ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕ ಇಂದು(ನ. 10) ವಿಶ್ವದಾದ್ಯಂತ ಬಿಡ. 10) ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಎಲ್ಲಾ ಪುಸ್ತಕ ಮಳಿಗೆಗಳಿಗೆ ರವಾನೆಯಾಗಿದೆ. ಏತನ್ಮಧ್ಯ, ಆತ್ಮಚರಿತ್ರೆ ಬಿಡುಗಡೆಯಾದ ದಿನವೇ ಬಿಜೆಪಿ ಕೃತಿಯ ಕುರಿತಂತೆ ಟೀಕೆಗಳನ್ನು ವ್ಯಕ್ತಪಡಿಸಿದೆ.ಸೋನಿಯಾ ಗಾಂಧಿ ಅವರು ತಮ್ಮ ಆತ್ಮಚರಿತ್ರೆ ಕೃತಿಯಲ್ಲಿ ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಪುಸ್ತಕಕ್ಕೆ 'ವೈಟ್ವಾಶಿಂಗ್'(ತಪ್ಪುಗಳನ್ನು ಮುಚ್ಚಿಹಾಕುವ ಪ್ರಯತ್ನ) ಎಂದು ಹೆಸರಿಟ್ಟಿದ್ದರೆ ಹೆಚ್ಚು ಸೂಕ್ತವಾಗಿರುತ್ತಿತ್ತು ಎಂದು ಕಿಡಿಕಾರಿದೆ.1975ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಬಗ್ಗೆ ಪುಸ್ತಕದಲ್ಲಿ ಪ್ರಸ್ತಾಪಿಸಿರುವ ಸೋನಿಯಾ ಗಾಂಧಿ, ಅದೊಂದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ.