ಪುಣೆ: ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಪರೀಕ್ಷೆಗೂ ಮುನ್ನವೇ ವಾಟ್ಸ್ಆ್ಯಪ್ ಮೂಲಕ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ನ್ಯಾಷನಲ್ ಸೆಂಟರ್ ಫಾರ್ ರೇಡಿಯೋ ಆಸ್ಟ್ರೋಫಿಸಿಕ್ಸ್. ವಿವೇಕ್ ಬಬನ್ ಹಡವಾಲೆ ಎಂಬುವವರ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ರವಾನೆಪುಣೆಯ ಸವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಎನ್ಸಿಆರ್ಎ ಕೇಂದ್ರದಲ್ಲಿ 2025ರ ಮೇ 24ರಂದು ವರ್ಕ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆಗೂ ಒಂದು ದಿನ ಮುನ್ನವೇ ಅಂದರೆ ಮೇ 23ರಂದು ಬೆಳಗ್ಗೆ ಸುಮಾರು 7.