ಮಹಾರಾಷ್ಟ್ರ ರಾಜಕೀಯದಲ್ಲಿ ಎನ್ಸಿಪಿ ಬಣಗಳ ವಿಲೀನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಫಡ್ನವೀಸ್, ವಿಲೀನ ನಿರ್ಧಾರ ಶರದ್ ಪವಾರ್ ಮತ್ತು ಸುನೇತ್ರಾ ಪವಾರ್ ಅವರಿಗೆ ಸೇರಿದ್ದು ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಭೇಟಿಗಳು ಈ ಊಹಾಪೋಹಗಳಿಗೆ ಕಾರಣವಾಗಿವೆ. ಪಕ್ಷದ ಭವಿಷ್ಯ ಕುರಿತು ಕುತೂಹಲ ಮೂಡಿಸಿದೆ. ಪುಣೆ, ನವೆಂಬರ್ 10: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಎರಡು ಬಣಗಳ ವಿಲೀನದ ಚರ್ಚೆ ಮುನ್ನೆಲೆಗೆ ಬಂದಿದೆ.