ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಗಳಿಂದ ವಾಯು ಮತ್ತು ಶಬ್ದ ಮಾಲಿನ್ಯ ತೀವ್ರವಾಗಿ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ AQI ಸೂಚ್ಯಂಕ ಗಣನೀಯವಾಗಿ ಹೆಚ್ಚಿದ್ದು, ಸಚಿವ ರಾಮಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ರಾತ್ರಿ 11 ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಸಿಸಿಟಿವಿ ಆಧಾರದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮುಂದಿನ ವರ್ಷದಿಂದ ಗ್ರೀನ್ ಪಟಾಕಿ ಕಡ್ಡಾಯಗೊಳಿಸುವ ಹೊಸ ನಿಯಮಾವಳಿಗಳ ಭರವಸೆ ನೀಡಿದ್ದಾರೆ. ಬೆಂಗಳೂರು, ನ.10: ದೀಪಾವಳಿ ಹಬ್ಬದ ಪಟಾಕಿ ಸದ್ದಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.