ದೀಪಾವಳಿ ರಜೆ ಹಿನ್ನೆಲೆಯಲ್ಲಿ ‘ರಾಮಾಯಣ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಐತಿಹಾಸಿಕ ಕಲೆಕ್ಷನ್ ಮಾಡುತ್ತಿದೆ. ಆರನೇ ದಿನ ಭಾರತದಲ್ಲಿ 94.10 ಕೋಟಿ ರೂಪಾಯಿ ನೆಟ್ ಗಳಿಸಿರುವ ಚಿತ್ರ, ವಿಶ್ವವ್ಯಾಪಿಯಾಗಿ ಒಟ್ಟು 823.50 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಹಬ್ಬದ ಸಂಭ್ರಮ ಮುಂದುವರಿದಿದ್ದು, ಶೀಘ್ರದಲ್ಲೇ 1000 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆಯಿದೆ. ದೀಪಾವಳಿ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಬಹುನಿರೀಕ್ಷಿತ 'ರಾಮಾಯಣ' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಕ್ಷರಶಃ ಸುನಾಮಿ ಎಬ್ಬಿಸಿದೆ. ಮೊದಲ ಮಂಗಳವಾರ ಅಂದರೆ ಆರನೇ ದಿನವೂ ಪ್ರೇಕ್ಷಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಚಿತ್ರ ದೇಶಾದ್ಯಂತ ಒಟ್ಟು 24,344 ಶೋಗಳಿಂದ ಬರೋಬ್ಬರಿ 94.10 ಕೋಟಿ ನೆಟ್ ಕಲೆಕ್ಷನ್ ಮಾಡಿದೆ.