ಬೆಂಗಳೂರಿನಲ್ಲಿ ಪಟಾಕಿ ಸಿಡಿತದ ವೇಳೆ ಸಂಭವಿಸಿದ ಅವಘಡಗಳಲ್ಲಿ 21 ವರ್ಷದ ಗರ್ಭಿಣಿ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಭೀರ ಗಾಯಾಳುಗಳಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಪಟಾಕಿ ಸಿಡಿಸಿದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಮಕ್ಕಳೂ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು, ನವೆಂಬರ್ 11: ನಗರದಲ್ಲಿ ದೀವಾಪವಳಿ ಸಂದರ್ಭ ಪಟಾಕಿ ಸಿಡಿತದಿಂದ ಗರ್ಭಿಣಿ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.