ಭಾರತಕ್ಕೆ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದುಕೊಡಲು ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಯಾವ ಹಂತಕ್ಕೆ ಬೇಕಾದರೂ ಹೋಗಲು ಸಿದ್ಧರಿದ್ದಾರೆ! ಮೈದಾನದಲ್ಲಿ ತಮ್ಮ ಸಿಕ್ಸರ್ಗಳ ಮೂಲಕ ಎದುರಾಳಿಗಳನ್ನು ನಡುಗಿಸುವ. ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಬ್ಯಾಟಿಂಗ್ನಂತೆಯೇ, ಹಾಸ್ಯಪ್ರಜ್ಞೆ ಮತ್ತು ನೇರನುಡಿಗೂ ಹೆಸರುವಾಸಿ. ಇದೀಗ ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ತಮ್ಮ ಹೊಸ ಶೋ ‘ಫ್ಯಾಮಿಲಿ ಫುಲ್ ಹೌಸ್ ವಿತ್ ರೋಹಿತ್ ಶರ್ಮಾ’ ಕಾರ್ಯಕ್ರಮದಲ್ಲಿ ಯುವ ನಾಯಕ ಶುಭಮನ್ ಗಿಲ್ ಅವರ ಮದುವೆಯ ಕುರಿತು ಹಿಟ್ಮ್ಯಾನ್ ಆಡಿರುವ ತಮಾಷೆಯ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ.