ದೇವಸ್ಥಾನ ಎಂದರೆ ಕೇವಲ ಕಟ್ಟಡವಲ್ಲ; ಅದು ನಮ್ಮ ನಂಬಿಕೆ, ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ. ಎಲ್ಲ ಸಮುದಾಯಗಳ ಆರಾಧನಾ ಕೇಂದ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. 4 Min Read ಬೆಳಗಾವಿ: ಕಳೆದ 7 ವರ್ಷಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ 156ಕ್ಕೂ ಅಧಿಕ ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು 150 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. 10 ಲಕ್ಷದಿಂದ 5 ಕೋಟಿವರೆಗೆ ವಿವಿಧ ದೇವಸ್ಥಾನಗಳಿಗೆ ಅನುದಾನ ನೀಡಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.