ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಹಾವೇರಿ ಜಿಲ್ಲೆಯ ಕಾಮನಹಳ್ಳಿ ಗ್ರಾಮದ ಬಳಿ, NH-48 ಪಕ್ಕದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಮಿಳುನಾಡಿನಿಂದ ಬೆಳಗಾವಿಗೆ ಹೊರಟಿದ್ದ ಹೆಲಿಕಾಪ್ಟರ್ನಲ್ಲಿದ್ದ ಆರು ಸಿಬ್ಬಂದಿ ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ವಾಯುಪಡೆ ತಂಡಕ್ಕಾಗಿ ಕಾಯಲಾಗುತ್ತಿದೆ. ಈ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಹಾವೇರಿ, ನ.11: ತಮಿಳುನಾಡಿನಿಂದ ಬೆಳಗಾವಿಗೆ ಹೊರಟಿದ್ದ ಭಾರತೀಯ ವಾಯುಪಡೆಯ (Indian Air Force) ಹೆಲಿಕಾಪ್ಟರ್ನಲ್ಲಿ ಹಾರಾಟದ ಮಧ್ಯೆಯೇ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.