ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟ ನಿವಾರಿಸುವ ಉದ್ದೇಶದೊಂದಿಗೆ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದ್ದು, ಬಿಎಂಟಿಸಿ ಬಸ್ ಪ್ರಯಾಣ ದರ ಶೇ.15 ರಿಂದ 17ರಷ್ಟು ಮತ್ತು ಉಳಿದ ಮೂರು ನಿಗಮಗಳ ಬಸ್ ಪ್ರಯಾಣ ದರ ಶೇ.13ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಹೀಗಾದಲ್ಲಿ ಬಹುತೇಕ ನಿಶ್ಚಿತವಾಗಿರುವ ನಂದಿನ ಹಾಲಿನ ದರದ ಏರಿಕೆ ಬಳಿಕ ಪ್ರಯಾಣವೂ ಜನಸಾಮಾನ್ಯರ ಪಾಲಿಗೆ ಹೊರೆಯಾಗಲಿದೆ. ಡೀಸೆಲ್ ಬೆಲೆ, ನೌಕರರ ವೇತನ ಹೆಚ್ಚಳ ಸೇರಿದಂತೆ ಇನ್ನಿತರ ಕಾರಣದಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು 8 ಸಾವಿರ ಕೋಟಿ ರು.ಗೂ ಹೆಚ್ಚಿನ ಹೊಣೆಗಾರಿಕೆ ಹೊಂದಿವೆ.