ಹುಬ್ಬಳ್ಳಿ: ಸದಾ ಕರ್ತವ್ಯದಲ್ಲಿ ನಿರತರಾಗಿರುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಅತ್ಯಗತ್ಯ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಮನೋದೈಹಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ಜಿಪಂ ಸ. ಹು-ಧಾ ಪೊಲೀಸ್ ಆಯುಕ್ತಾಲಯದಿಂದ ಇಲ್ಲಿಯ ಗೋಕುಲ ರಸ್ತೆಯ ನಗರ ಸಶಸ್ತ್ರ ಮೀಸಲು ಪಡೆಯ ಕವಾಯತ ಮೈದಾನದಲ್ಲಿ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ಅಪರಾಧಗಳ ತಡೆ, ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಸೇರಿದಂತೆ ವಿವಿಧ ಕೆಲಸದಲ್ಲಿ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ತವ್ಯದ ನಡುವೆಯೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪೊಲೀಸ್ ಆಯುಕ್ತ ಭೂಷಣ ಬೋರಸೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸರದು ಬಹಳ ಒತ್ತಡದ ಕೆಲಸ.