ಚುನಾವಣಾ ಭರವಸೆಗಳನ್ನು ಈಡೇರಿಸುವಂತೆ ಹಾಗೂ ಮತಾಂತರ ನಿಷೇಧ ಮತ್ತು ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಅಲ್ಪಸಂಖ್ಯಾತರು, ರೈತರು ಹಾಗೂ ದಲಿತ ಸಂಘಟನೆಗಳು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿವೆ. ಇತ್ತ ಕಾಯ್ದೆ ವಾಪಸಾತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯಾದ್ಯಂತ ಆಂದೋಲನ ಮಾಡೋದಾಗಿ ಎಚ್ಚರಿಸಿದೆ. ಬೆಂಗಳೂರು, ನವೆಂಬರ್ 12: ಚುನಾವಣಾ ಭರವಸೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಅಲ್ಪಸಂಖ್ಯಾತರು, ರೈತರು, ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕ್ರೈಸ್ತ, ಮುಸ್ಲಿಂ ಧಾರ್ಮಿಕ ಮುಖಂಡರು, ನಾಗರಿಕ ಸಂಘಟನೆಗಳು ಹೋರಾಟದಲ್ಲಿ ಭಾಗಿಯಾಗಿದ್ದು, 2023ರ ಚುನಾವಣೆಯ ಹಲವು ಭರವಸೆಗಳನ್ನು ಈಡೇರಿಸಿಲ್ಲವೆಂದು ಆರೋಪಿಸಿದ್ದಾರೆ.