ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಹೆಲ್ಮೆಟ್ ಹಾಕಿಕೊಳ್ಳುವ ಸಣ್ಣ ಕ್ರಮ ಅಪಘಾತದ ಸಂದರ್ಭದಲ್ಲಿ ಜೀವ ಉಳಿಸುತ್ತದೆ. ಆದರೆ ಒಂದಷ್ಟು ಜನ ದಂಡದಿಂದ ತಪ್ಪಿಸಿಕೊಳ್ಳಲು ಯಾವುದೋ ಒಂದು ಹೆಲ್ಮೆಟ್ ಧರಿಸಿ, ಬೈಕ್ ಓಡಿಸುತ್ತಾರೆ. ಈ ಹೆಲ್ಮೆಟ್ ಕಳಪೆ ಗುಣಮಟ್ಟದ್ದಾಗಿದ್ದರೆ ಅಥವಾ ತಲೆಗೆ ಸರಿಯಾಗಿ ಹೊಂದಿಕೊಳ್ಳದಿದ್ದರೆ, ಅಪಘಾತದ ಸಂದರ್ಭದಲ್ಲಿ ಸಾಕಷ್ಟು ನೋವನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಖರೀದಿಸುವಾಗ ಈ ಎಲ್ಲಾ ವಿಷಯಗಳನ್ನು ಮುಖ್ಯವಾಗಿ ಪರಿಶೀಲಿಸಬೇಕು.