ಸರಗೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಆಸಕ್ತಿ, ಸಾಮರ್ಥ್ಯ ಹಾಗೂ ಗುರಿಗೆ ಅನುಗುಣವಾಗಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಲ. ವೃತ್ತಿಜೀವನದ ಅನುಭವಗಳು, ಸಾಧನೆಯ ಹಾದಿಯಲ್ಲಿ ಎದುರಿಸಿದ ಸವಾಲುಗಳು, ಪರಿಶ್ರಮ, ಶಿಸ್ತು ಹಾಗೂ ಸಮಯದ ಸದುಪಯೋಗದ ಮಹತ್ವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಹಣಕಾಸಿನ ಅರಿವು ಬೆಳೆಸಿಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ನಿರಂತರ ಪರಿಶ್ರಮ ಮತ್ತು ಆಸಕ್ತಿ ಅಗತ್ಯ. ಕಷ್ಟಪಟ್ಟು ಓದಿದರೆ ಸಿಎಯಂತಹ ಉನ್ನತ ವೃತ್ತಿಪರ ಹುದ್ದೆಗಳನ್ನು ತಲುಪಲು ಸಾಧ್ಯ. ಜೀವನದಲ್ಲಿ ಸೋಲು ಎದುರಾದಾಗ ಎದೆಗುಂದದೆ ಅದನ್ನೇ ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.