ಸಾಲಿಗ್ರಾಮ: ಯುವಕರು ಮತ್ತು ಮಹಿಳೆಯರು ಆರ್ಥಿಕ ಅಭಿವೃದ್ಧಿ ಹೊಂದಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಶಾಸಕ ಡಿ.ರವಿಶಂಕರ್ ಸಲಹೆ ನೀಡಿದರು. ತಾಲೂಕಿನ ಹನಸೋಗೆ. ತಾಲೂಕಿನ ಹನಸೋಗೆ ಗ್ರಾಮದಲ್ಲಿ ಗುರುವಾರ ನಾಯಕ ಸಮಾಜದಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಅವಳಿ ತಾಲೂಕಿನಲ್ಲಿ ವಾಲ್ಮೀಕಿ ಸಮಾಜದ ಭವನಗಳ ನಿರ್ಮಾಣಕ್ಕೆ ಸುಮಾರು 6 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿದ್ದೇನೆ. ಹನಸೋಗೆ ಗ್ರಾಮದಲ್ಲಿ ಸಮುದಾಯ ಭವನ ಅರ್ಧಕ್ಕೆ ನಿಂತಿದ್ದು, ಈ ಬಗ್ಗೆ ಗ್ರಾಮದ ಮುಖಂಡರು ನನ್ನ ಗಮನಕ್ಕೆ ತಂದಿದ್ದರು. ಈ ವರ್ಷ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಣೆ ಮಾಡುತ್ತಿರುವುದು ಖುಷಿ ತಂದಿದೆ.