ಎನ್ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್ ತಮ್ಮ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದು, 33 ವರ್ಷಗಳ ಸುದೀರ್ಘ ಸೇವೆಯನ್ನು ಅಂತ್ಯಗೊಳಿಸಿದ್ದಾರೆ. ಕಂಪನಿಯ ಸಿಎಫ್ಒ ಕೊಲೆಟ್ ಕ್ರೆಸ್ ಅವರನ್ನು ಮಧ್ಯಂತರ ಸಿಇಒ ಆಗಿ ನೇಮಿಸಲಾಗಿದೆ. ಎನ್ವಿಡಿಯಾದ ನಾಯಕತ್ವದಲ್ಲಿ ಮತ್ತೊಂದು ಮಹತ್ವದ ಬದಲಾವಣೆಯಾಗಿದ್ದು, ಹಾರ್ವೆ ಸಿ. ಜೋನ್ಸ್ ಅವರನ್ನು ನಿರ್ದೇಶಕರ ಮಂಡಳಿಯ ಮೊದಲ ಅಧ್ಯಕ್ಷರಾಹಿ ಆಯ್ಕೆಯಾಗಿದ್ದಾರೆ. ವಾಷಿಂಗ್ಟನ್, ನವೆಂಬರ್ 12: ಅಮೆರಿಕದ ಪ್ರಮುಖ ತಂತ್ರಜ್ಞಾನ ಕಂಪನಿ ಎನ್ವಿಡಿಯಾದ (Nvidia) ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಮತ್ತು ನಿರ್ದೇಶಕರ ಮಂಡಳಿ ಸದಸ್ಯ ಸ್ಥಾನಗಳಿಗೆ ಜೆನ್ಸನ್ ಹುವಾಂಗ್ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.