ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ₹2 ಲಕ್ಷ ಕೃಷಿ ಸಾಲ ಮನ್ನಾ ಮಾಡಿ; ವಿಜಯೇಂದ್ರ ಆಗ್ರಹ. ಮಹಾರಾಷ್ಟ್ರದಲ್ಲಿ ರೈತರಿಗೆ ₹2 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಿರುವ ಮಾದರಿಯಲ್ಲೇ ಕರ್ನಾಟಕದಲ್ಲೂ ಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಹೈನುಗಾರಿಕೆಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಆತ್ಮಸ್ಥೈರ್ಯ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.