Divya Mittal: ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿದ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್, ಯುಪಿ - ರಾಜಕೀಯ. ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದಿರುವ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ತಮ್ಮದೇ ಪಕ್ಷವನ್ನು ಪ್ರಾರಂಭಿಸಿದ್ದಾರೆ. ಹೌದು ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ಅಕ್ಟೋಬರ್ 15ರ ಗುರುವಾರ ಜನ್ ನೀತಿ ಭಾರತ್ ಎನ್ನುವ ಹೊಸ ಪಕ್ಷವನ್ನು ಘೋಷಿಸಿದ್ದಾರೆ. ಸೇವೆಯಿಂದ ಸ್ವಯಂಪ್ರೇರಿತ ನಿವೃತ್ತಿಯನ್ನು ಆಯ್ಕೆ ಮಾಡಿಕೊಂಡ ಒಂದು ತಿಂಗಳ ನಂತರ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.