ಇನ್ಮುಂದೆ ಜನಗಣತಿಗೆ ಖಾಸಗಿ ಶಾಲಾ ಶಿಕ್ಷಕರ ಬಳಕೆ: ಕೇಂದ್ರ ಸರ್ಕಾರದ ಮಹತ್ವದ ತಿದ್ದುಪಡಿ. ದೇಶಾದ್ಯಂತ ನಡೆಯುವ ಜನಗಣತಿಯಲ್ಲಿ ಇದುವರೆಗೆ ಕೇವಲ ಸರ್ಕಾರಿ ಶಾಲಾ ಶಿಕ್ಷಕರು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನ ಮಾತ್ರ ಗಣತಿದಾರರನ್ನಾಗಿ ಬಳಸಿಕೊಳ್ಳಲಾಗುತ್ತಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನ ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲಾ ಶಿಕ್ಷಕರು ಜನಗಣತಿ ಕಾರ್ಯದಲ್ಲಿ ಭಾಗಿಯಾಗುವುದು ಕಡ್ಡಾಯವಾಗಲಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುವ ಗಣತಿ ಪ್ರಕ್ರಿಯೆಯಲ್ಲಿ ಅನುದಾನಿತ ಹಾಗೂ ಅನುದಾನರಹಿತ.