ಕನ್ನಡ ಚಿತ್ರರಂಗಕ್ಕೆ ಬಂಪರ್ ಸುದ್ದಿ: ಮೈಸೂರಿನಲ್ಲಿ ₹729 ಕೋಟಿ ವೆಚ್ಚದ ಫಿಲ್ಮ್ ಸಿಟಿಗೆ ಸಂಪುಟ ಅಸ್ತು. ಬೆಂಗಳೂರು: ಕರ್ನಾಟಕದ ಚಲನಚಿತ್ರೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಫಿಲ್ಮ್ ಸಿಟಿ ನಿರ್ಮಿಸುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ನಂಜನಗೂಡು ತಾಲ್ಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 160 ಎಕರೆ 8 ಗುಂಟೆ ವಿಸ್ತೀರ್ಣದ ಜಾಗದಲ್ಲಿ ಈ ಫಿಲ್ಮ್ ಸಿಟಿ ನಿರ್ಮಾಣವಾಗಲಿದ್ದು, ಯೋಜನೆಗೆ ಅಂದಾಜು ₹729.43 ಕೋಟಿ.